
ತೀರ್ಥಹಳ್ಳಿ: ಪತ್ರೋಡೆ ಎಲೆ (ಮರ ಕೆಸ )ಕೀಳಲು ಮರ ಏರಿದ್ದ ಯುವಕನೊಬ್ಬ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲೂಕಿನ ಲಕ್ಕುಂದ ಸಮೀಪ ಸಂಭವಿಸಿದೆ.
ಮೃತರನ್ನು ತೀರ್ಥಹಳ್ಳಿ ಪಟ್ಟಣದ ಇಂದಿರಾನಗರ ನಿವಾಸಿ ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಮಾಹಿತಿಯಂತೆ, ಪತ್ರೋಡೆ ಎಲೆ ಕೀಳುವ ಉದ್ದೇಶದಿಂದ ಮರ ಏರಿದ್ದ ವೇಳೆ ಆಕಸ್ಮಿಕವಾಗಿ ಮೇಲಿನಿಂದ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ. ಇದರಿಂದ ತೀವ್ರ ವಿದ್ಯುತ್ ಶಾಕ್ ಹೊಡೆದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಭಿಷೇಕ್ ಶೆಟ್ಟಿ ಅವರಿಗೆ ಇತ್ತೀಚೆಗಷ್ಟೇ ವಿವಾಹವಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಬಂಧು-ಬಳಗ ಹಾಗೂ ಸ್ನೇಹಿತರಲ್ಲಿ ತೀವ್ರ ಶೋಕ ಆವರಿಸಿದೆ.
ಘಟನೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.















Leave a Reply