ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಹಯೋಗದಲ್ಲಿ ಆರು ಮಂದಿ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ
ಶಿವಮೊಗ್ಗ: ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಲು ಅನುಕೂಲವಾಗುವಂತೆ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಆರು ಮಂದಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು.
ವಿಶೇಷ ಚೇತನರು ಯಾರಿಗೂ ಹೊರೆಯಾಗಬಾರದು, ಅವರು ಸ್ವಾವಲಂಬಿಗಳಾಗಿ ಬದುಕಬೇಕು ಎಂಬ ಉದ್ದೇಶದಿಂದ ಖಾಸಗಿ ಸಂಸ್ಥೆಗಳ ಸಿ.ಎಸ್.ಆರ್ (CSR) ನಿಧಿಯನ್ನು ಬಳಸಿಕೊಂಡು ಈ ವಾಹನಗಳನ್ನು ವಿತರಿಸಲಾಗುತ್ತಿದೆ. ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಇಂತಹ ಮಾನವೀಯ ಕಾರ್ಯಗಳಿಗೆ ಕೈಜೋಡಿಸಿದಾಗ ಮಾತ್ರ ಸರ್ವರೂ ಸಮಾನವಾಗಿ ಬದುಕಲು ಸಾಧ್ಯ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ನಿಖಿಲ್ ಬಿ ,ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
















Leave a Reply