ಕಾರು-ಬೈಕ್ ಭೀಕರ ಡಿಕ್ಕಿ: 26 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

Blue and Red Voter Education Banner 20260320 161205 0000 scaled ಕಾರು-ಬೈಕ್ ಭೀಕರ ಡಿಕ್ಕಿ: 26 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ
Spread the love

ಆನಂದಪುರ: ವ್ಯಾಗನರ್ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ರಿಪ್ಪನ್ ಪೇಟೆಯಿಂದ ಆನಂದಪುರದ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಆನಂದಪುರದಿಂದ ರಿಪ್ಪನ್ ಪೇಟೆ ಕಡೆಗೆ ಸಾಗುತ್ತಿದ್ದ ಕಾರಿನ ನಡುವೆ ಅಂದಾಸುರದ ಬಳಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.


ಅಪಘಾತದಲ್ಲಿ ಬೈಕ್ ಸವಾರರಾದ ಬೀಸನ ಗದ್ದೆ ಗ್ರಾಮದ ಮಹೇಶ್ (26)  ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.


img 20260319 wa00153802080288350165382 ಕಾರು-ಬೈಕ್ ಭೀಕರ ಡಿಕ್ಕಿ: 26 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ
fb img 17739172438983903196910985732359 ಕಾರು-ಬೈಕ್ ಭೀಕರ ಡಿಕ್ಕಿ: 26 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

Leave a Reply

Your email address will not be published. Required fields are marked *